ಗಣ (ಗಣಿತ)
From Wikipedia, the free encyclopedia
ಮೂಲಭೂತವಾಗಿ, ಗಣ ಎಂಬುದು ಸಮೂಹಗಳ ನಿರೂಪಣೆ. ಗಣವು ವಿಭಿನ್ನ ವಸ್ತುಗಳ ಸಂಗ್ರಹ.[1][2][3] ಗಣಿತ ಮತ್ತು ಗಣಕಯಂತ್ರ ಶಾಸ್ತ್ರದಲ್ಲಿ ಗಣ ಸಿದ್ಧಾಂತ (Set Theory) ಒಂದು ಪ್ರಮುಖವಾದ ವಿಷಯ. ಉದಾಹರಣೆಗಳು: W = {೦, ೧, ೨, ೩, ೪, ...} ಎಂಬುದು ಅಂಕಿಗಳ ಒಂದು ಅನಂತ ಗಣವಾದರೆ (infinite set), ಪ = {ಹಸು, ಕಾಗೆ, ಕೋಳಿ, ಸಿಂಹ, ಹುಲಿ} ಎಂಬುದು, ೫ ಪ್ರಾಣಿ ಸದಸ್ಯಗಳ ಸಾಂತಗಣ, ವಾಸ್ತವ ಸರಳರೇಖೆಯ (line of real numbers) ಮೇಲಣ ಬಿಂದುಗಳ ಗಣ, (0,1) ಅಂತರದಲ್ಲಿ ವ್ಯಾಖ್ಯಿಸಿರುವ ವಾಸ್ತವ ಬೆಲೆಗಳುಳ್ಳ (real values) ಅವಿಚ್ಛಿನ್ನ ಉತ್ಪನ್ನಗಳ ಗಣ (set of continuous functions), ಗಣಗಳ ಗಣ (set of sets). ಸಾಮಾನ್ಯವಾಗಿ, ಗಣ ಎಂಬುದು ವಸ್ತು ಮಾದರಿ ಸಮೂಹಗಳ ನಿರೂಪಣೆಯೇ ಹೊರತು, ವಸ್ತು ನಿದರ್ಶನ ಗಳ ಸಮೂಹವಲ್ಲ. ಆದ್ದರಿಂದ, ಪ = {೨ ಹಸು, ೩ ಕಾಗೆ, ೫ ಕೋಳಿ, ೧ ಸಿಂಹ, ಹುಲಿ, ಹುಲಿ} ಎಂಬುದು ತಪ್ಪಾದ ನಿರೂಪಣೆ. ವಸ್ತು ನಿದರ್ಶನಗಳ ಸಮೂಹಗಳನ್ನು, ಆವಳಿ-ಗಣ (multi-set) ಎಂದು ಕರೆಯಲಾಗುತ್ತದೆ. ಗಣಗಳ ಲಕ್ಷಣಗಳು ಆವಳಿ-ಗಣಗಳಿಗಿಂತ ವಿಭಿನ್ನವಾದುದು.
ಗಣಗಳ ನಿರೂಪಣೆ ಯಾವುದೇ ಅನ್ವಯವನ್ನು ಹೊಂದಿರುವುದಿಲ್ಲ. ಆದ್ದರಿಂದ {೨, ೪, ೬, ೮} ಮತ್ತು {೪, ೨, ೮, ೬} ಇವೆರಡು ಗಣಗಳೂ ಒಂದೆ.[4][5][6] ಸಾಮಾನ್ಯವಾಗಿ, ಗಣಗಳು ಒಂದೇ ಮಾದರಿಯ ವಸ್ತು ಸಮೂಹವನ್ನು ನಿರೂಪಿಸುತ್ತವೆ. ಆದ್ದರಿಂದ {೧, ೨, ೩, ಹಸು} ಎಂಬ ಗಣ ನಿರೂಪಣೆ, ಸಾಮಾನ್ಯವಾಗಿ ತಪ್ಪೆಂದು ಭಾವಿಸಲಾಗುತ್ತದೆ.