ಪರಶುರಾಮ
ಒಂದು ಪುರಾಣ ಪಾತ್ರ / From Wikipedia, the free encyclopedia
ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ. ಇವರು ರೇಣುಕ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು.ಇವರು ತಮ್ಮ ತಾಯಿಗಾಗಿ ಪರಶುಘಡದಲ್ಲಿ(ಸವದತ್ತಿ) ತಪಸ್ಸು ಮಾಡಿ ವಿಶ್ನುವಿನಿಂದ ಪರುಶು(ಕೊಡಲಿ) ಪಡೆದಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು.