ಫ್ಲಾರೆನ್ಸ್ ನೈಟಿಂಗೇಲ್
From Wikipedia, the free encyclopedia
ಫ್ಲಾರೆನ್ಸ್ ನೈಟಿಂಗೇಲ್ - "ಲೇಡಿ ವಿತ್ ದಿ ಲ್ಯಾಂಪ್" ಎಂದೇ ಪ್ರಖ್ಯಾತರಾಗಿದ್ದ ಮಹಿಳೆ.ಜನನ ಇಟಲಿಯಲ್ಲಿ ೧೮೨೦ರ ಮೇ ೧೨ ರಂದು.ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ,ತಮ್ಮ ೧೭ನೇ ವಯಸ್ಸಿನಲ್ಲೇ ನರ್ಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು.ಸಮಾಜದಲ್ಲಿ ಹಿಂದುಳಿದ ಹಾಗೂ ಬಡಜನರಿಗೆ ವೈದ್ಯಕೀಯ ನೆರವು ದೊರೆಯಬೇಕೆಂಬುದೇ ಇವರ ಧ್ಯೇಯವಾಗಿತ್ತು.೧೮೫೪ರ ಅಕ್ಟೋಬರ್ ೨೧ರಂದು ತಮ್ಮ ೩೮ ನರ್ಸ್ ತಂಡದೊಂದಿಗೆ ಕ್ರಿಮಿಯನ್ ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಶುಶ್ರೂಷೆ ಮಾಡಿದರು.ಮಿಲಿಟರಿ ಆಸ್ಪತ್ರೆಗಳ ಹಾಗೂ ಇತರ ಆಸ್ಪತ್ರೆಗಳ ಸುಧಾರಣೆಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಅವುಗಳನ್ನು ಜಾರಿಗೆ ತರಲು ಪ್ರಯತ್ನಿಸಿದಳು. ಇದಕ್ಕಾಗಿ ತನ್ನ ಜೀವಮಾನವನ್ನೇ ಮುಡಿಪಾಗಿಟ್ಟಳು. ಇಂದಿಗೂ ಈಕೆ ರೂಪಿಸಿದ ಸುಧಾರಣಾ ಕ್ರಮಗಳನ್ನು ಜಗತ್ತಿನ ಎಲ್ಲ ಆಸ್ಪತ್ರೆಗಳೂ ಒಂದಲ್ಲ ಒಂದು ರೀತಿಯಲ್ಲಿ ಅನುಸರಿಸುತ್ತಿವೆ. ಈ 'ದೀಪ ಧಾರಿಣಿ' ಇಟಲಿಯ ಫ್ಲಾರೆನ್ಸ್ ನಗರದಲ್ಲಿ ಹುಟ್ಟಿದ ಪ್ಲಾರೆನ್ಸ್ ನೈಟಿಂಗೇಲ್. ಇವರ ನೆನಪಿಗಾಗಿ ಲಂಡನ್ನ ವಾಟರ್ಲೂ ಅರಮನೆಯಲ್ಲಿ ಬೃಹತ್ ಪ್ರತಿಮೆ ನಿರ್ಮಿಸಲಾಗಿದೆ.